ಕಡಬ ಟೈಮ್ಸ್, ಮರ್ದಾಳ:ಮರ್ದಾಳ ಪೇಟೆಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ವಿಷ ಸೇವಿಷಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶುಕ್ರವಾರ ರಾತ್ರಿ ವರದಿಯಾಗಿದೆ.
ಸಾಂತಪ್ಪ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು .ಹೊಟೇಲ್ ಸಾಂತಪ್ಪ ಎಂದೇ ಚಿರಪರಿಚಿತರಾಗಿದ್ದ ಇವರು ಶುಕ್ರವಾರ ಸಾಯಂಕಾಲ ಐತ್ತೂರು ಭ್ರಾಂತಿಕಟ್ಟೆಯ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ.
ತಡರಾತ್ರಿ ವೇಳೆ ಮೃತದೇಹವು ಕಂಡುಬಂದಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಪೊಲೀಸರ ತನಿಖೆಯ ಬಳಿಕ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬರಬೇಕಿದೆ.