ಕಡಬ ಟೈಮ್ಸ್, ಮರ್ದಾಳ: ಕಡಬ ತಾಲೂಕಿನ ಐತ್ತೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಟ್ಟತ್ತಿಲ್ ಮನೆಯ ಕೆ ಅನೂಪ್ ಎಂಬುವರ ಪತ್ನಿ ಸೌಮ್ಯ ಎಂಬವರು ನಾಪತ್ತೆಯಾದವರು. ಈ ಬಗ್ಗೆ ಅವರ ಪತಿ ಅನೂಪ್ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂ.8ರಂದು ಮುಂಜಾನೆ ಗರ್ಭಿಣಿ ಮಹಿಳೆಯೋರ್ವರನ್ನು ಡೆಲಿವರಿಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಲು ಇದೆ ಎಂದು ಹೇಳಿ ಮನೆಯಿಂದ ಹೊರಟ ಇವರು ನಂತರದಲ್ಲಿ ಕಾಣೆಯಾಗಿದ್ದಾರೆ. ಆಟೋ ರಿಕ್ಷಾದಲ್ಲಿ ಬಾಡಿಗೆ ಮಾಡಿಕೊಂಡು ಕಡಬ ಸರಕಾರಿ ಆಸ್ಪತ್ರೆಗೆ ಬಂದಿದ್ದಾಗಿ ಮಾಹಿತಿ ಲಭಿಸಿದೆ. ಸಂಜೆಯಾದರೂ ಪತ್ನಿ ಮನೆಗೆ ಬಾರದೇ ಇದ್ದುದರಿಂದ ಪತಿ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.