ಕಡಬ ಟೈಮ್ಸ್, ಪುತ್ತೂರು: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ ತಾಲೂಕು ವ್ಯಾಪ್ತಿಗೆ ಸೇರ್ಪಡೆಗೊಂಡ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರು ಹಾಗೂ ಪಿಡಿಓ ರವರಿಗೆ ಬೀಳ್ಕೊಡುಗೆ ಸಮಾರಂಭ ಕಳೆದ ಶನಿವಾರ ತಾ.ಪಂ.ವತಿಯಿಂದ ತಾ.ಪಂ.ಸಭಾಂಗಣದಲ್ಲಿ ನಡೆದಿದೆ.
ಶಾಸಕ ಸಂಜೀವ ಮಠಂದೂರು ಸದಸ್ಯರನ್ನು ಸನ್ಮಾನಿಸಿದರು. ತಾ.ಪಂ.ಸದಸ್ಯ ರಾಧಾಕೃಷ್ಣ ಬೋರ್ಕರ್ ಅಧ್ಯಕ್ಷ ತೆ ವಹಿಸಿದ್ದರು.
ವೇದಿಕೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ, ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಸಹಾಯಕ ನಿರ್ದೇಶಕಿ ಶೈಲಜಾ ಉಪಸ್ಥಿತರಿದ್ದರು.