ಕಡಬ ಟೈಮ್ಸ್, ಪಟ್ಟಣಸುದ್ದಿ :ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ಕೆ.ಪಿ.ಸಿ.ಸಿ.ಯ 41ನೇ ಅಧ್ಯಕ್ಷರಾಗಿ ಪದಗ್ರಹಣ ಹೊಂದುತ್ತಿರುವ ಹಿನ್ನೆಲೆಯಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ 19 ಕಡೆಗಳಲ್ಲಿ ನೇರ ಕಾರ್ಯಕ್ರಮ ವ್ಯವಸ್ಥೆಯನ್ನು ಮಾಡಲಾಗಿದೆ.
ಕಡಬದ ಒಕ್ಕಲಿಗ ಗೌಡ ಸಭಾ ಭವನದಲ್ಲಿ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ಪರದೆಯನ್ನು ಹಾಕಲಾಗಿದ್ದು ಪಕ್ಷದ ಕಾರ್ಯಕರ್ತರು ವೀಕ್ಷಿಸುತ್ತಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಕೈಕುರೆ, ಜಿ .ಪಂ ಸದಸ್ಯ ಪಿ.ಪಿ ವರ್ಗೀಸ್, ತಾ.ಪಂ ಸದಸ್ಯ ಪಝಲ್ ಕೋಡಿಂಬಾಳ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದಾರೆ.ಸಭೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಕಾರ್ಯಕ್ರಮ ವೀಕ್ಷಿಸುತ್ತಿರುವುದು ಕಂಡು ಬಂತು.