Home ಪ್ರಮುಖ ಸುದ್ದಿ ಅಂತಿಮ ಪದವಿ ಪರೀಕ್ಷೆ ಬಗ್ಗೆ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠದ ಮಹತ್ವದ ತೀರ್ಪು

ಅಂತಿಮ ಪದವಿ ಪರೀಕ್ಷೆ ಬಗ್ಗೆ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠದ ಮಹತ್ವದ ತೀರ್ಪು

1
0

ಕಡಬ ಟೈಮ್ಸ್, ಮುಖ್ಯ ಸುದ್ದಿ: ಕೋವಿಡ್ ಸೋಂಕಿನ ಕಾರಣ  ವಿಶ್ವವಿದ್ಯಾಲಯಗಳ ಅಂತಿಮ ವರ್ಷದ/ಸೆಮಿಸ್ಟರ್ ನ ಆನ್ ಲೈನ್/ಆಫ್ ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಳ್ಳಿಹಾಕಿದೆ.

UNIC-KADABA

ಯುಜಿಸಿ ನಿರ್ದೇಶನದಂತೆ ಪರೀಕ್ಷೆ ನಡೆಯಲಿ ಎಂದು ತಿಳಿಸಿದೆ. ಈ ಮೂಲಕ ಯುಜಿಸಿ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರ ನೇತೃತ್ವದ ತ್ರಿಸದಸ್ಯ ಪೀಠ ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ.ಸೆಪ್ಟೆಂಬರ್ 30ರೊಳಗೆ ದೇಶದೆಲ್ಲೆಡೆ ಅಂತಿಮ ವರ್ಷದ ಪರೀಕ್ಷೆಯನ್ನು ನಡೆಸುವಂತೆ ಯುಜಿಸಿ ಜುಲೈ 6 ರಂದು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿತ್ತು.ಇದರ ವಿರುದ್ಧ ಹಲವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಸುಪ್ರೀಂಕೋರ್ಟ್ ಹೇಳಿದ್ದೇನು?

GURUJI ADD

ಅಂತಿಮ ಪದವಿ ಪರೀಕ್ಷೆ ಯಜಿಸಿ ನಿಯಮಾವಳಿ ಕಡ್ಡಾಯ. ಅಷ್ಟೇ ಅಲ್ಲ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳಿಗೆ  ಉತ್ತೀರ್ಣ ನೀಡುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಕೋವಿಡ್ 19 ಸೋಂಕಿನ ದೃಷ್ಟಿಕೋನದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯ ಅಧಿಕಾರ ಉಪಯೋಗಿಸಿಕೊಂಡು ರಾಜ್ಯಗಳು ಪರೀಕ್ಷೆಯನ್ನು ಮುಂದೂಡಬಹುದಾಗಿದೆ. ಒಂದು ವೇಳೆ ಯುಜಿಸಿಎ ಸೆ.30ರ ಗಡುವನ್ನು ಮೀರಿ ಪದವಿ ಅಂತಿಮ ಪರೀಕ್ಷೆಯನ್ನು ಮುಂದೂಡಬೇಕೆಂದು ರಾಜ್ಯಗಳು ಬಯಸಿದರೆ, ಅಂತಹ ರಾಜ್ಯಗಳು ಯುಜಿಸಿಯನ್ನು ಸಂಪರ್ಕಿಸಿ ಹೊಸ ದಿನಾಂಕವನ್ನು ಗೊತ್ತುಪಡಿಸಿಕೊಂಡು ಪ್ರಕಟಿಸಲಿ ಎಂದು ಸೂಚಿಸಿದೆ.

LEAVE A REPLY

Please enter your comment!
Please enter your name here