Home ಪ್ರಮುಖ ಸುದ್ದಿ ಕಡಬ: ರಾಜ್ಯ ಸರಕಾರದ ಬ್ರಷ್ಟಾಚಾರ, ತನಿಖೆಗೆ ಅಗ್ರಹಿಸಿ ಕಡಬ ಕಾಂಗ್ರೇಸ್‍ ವತಿಯಿಂದ ಪ್ರತಿಭಟನೆ

ಕಡಬ: ರಾಜ್ಯ ಸರಕಾರದ ಬ್ರಷ್ಟಾಚಾರ, ತನಿಖೆಗೆ ಅಗ್ರಹಿಸಿ ಕಡಬ ಕಾಂಗ್ರೇಸ್‍ ವತಿಯಿಂದ ಪ್ರತಿಭಟನೆ

ಕಡಬ ಟೈಮ್ಸ್,ಪಟ್ಟಣ ಸುದ್ದಿ: ರಾಜ್ಯ ಸರ್ಕಾರ ತಂದಿರುವ ರೈತ ವಿರೋಧಿ ಭೂಸುಧಾರಣಾ ಕಾಯ್ದೆ ತಿದ್ದುಪಡಿ , ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ತಕ್ಷಣ ಹಿಂಪಡೆಯಬೇಕು ಹಾಗೂ ಕೊರೊನಾ ನಿಯಂತ್ರಣದಲ್ಲಿ ನಡೆಯುತ್ತಿರುವ ಬ್ರಷ್ಟಾಚಾರದ ತನಿಖೆಯನ್ನು ಉಚ್ಚನ್ಯಾಯಾಲಯದ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಅಗ್ರಹಿಸಿ ಗುರುವಾರ ಕಡಬ ಬ್ಲಾಕ್ ಕಾಂಗ್ರೇಸ್ ವತಿಯಿಂದ ಪ್ರತಿಭಟನೆ ನಡೆಯಿತು

UNIC-KADABA

ಕಡಬ ತಹಶಿಲ್ದಾರ್ ಕಛೇರಿ ಎದರು ಸೇರಿದ ಕಾಂಗ್ರೇಸ್ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗಣೇಶ್ ಕೈಕುರೆ ಅವರು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಹಲವು ಜನವಿರೋಧಿಗಳನ್ನು ಜಾರಿಗೆ ತಂದು ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಲೇ ಬಂದಿದೆ, ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಇದನ್ನು ತಕ್ಷಣ ಹಿಂಪಡೆಯಬೇಕು ಎಂದು ಅಗ್ರಹಿಸಿದರು. ಮಹಾಮಾರಿ ಕೊರೋನಾ ನಿಭಾಯಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸುವಲ್ಲಿ ಕೂಡಾ ಬ್ರಷ್ಟಚಾರ ನಡೆದಿದ್ದು, ಇದರ ಸಮಗ್ರ ತನಿಖೆ ನಡೆಸಬೇಕು ಎಂದು ಗಣೇಶ್ ಒತ್ತಾಯಿಸಿದರು. .

GURUJI ADD

ತಹಶಿಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ, ಕಾಂಗ್ರೇಸ್ ಮುಖಂಡರಾದ ಬಾಲಕೃಷ್ಣ ಗೌಡ ಬಳ್ಳೇರಿ, ಫಝಲ್ ಕೋಡಿಂಬಾಳ, ಶಶಿಧರ ಬೊಟ್ಟಡ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here