ಕಡಬ ಟೈಮ್ಸ್, ಮುಖ್ಯ ಸುದ್ದಿ :ಕರ್ನಾಟಕ ಕೇಡರ್ ನ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಭಾರತೀಯ ಜನತಾ ಪಾರ್ಟಿ ಗೆ ಸೇರುವುದು ಖಚಿತವಾಗಿದೆ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ದೆಹಲಿಯ ಪಕ್ಷದ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಕರ್ನಾಟಕದ ಸಿಂಗಂ ಎಂದೇ ಪ್ರಸಿದ್ದರಾಗಿದ್ದ ಅಣ್ಣಾಮಲೈ ಅವರು ತಮಿಳುನಾಡಿನ ಕರೂರು ಮೂಲದವರು. ಸದ್ಯ ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಅವರಿಗೆ ತಮಿಳುನಾಡಿನಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂದಿನ ವರ್ಷದ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿಯು ದಕ್ಷಿಣದ ರಾಜ್ಯದತ್ತ ಚಿತ್ತ ಹರಿಸಿದೆ.
ಐಪಿಎಸ್ ಅಧಿಕಾರಿಯಾಗಿ ಕಾರ್ಕಳದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ಆರಂಭಿಸಿದ ಅವರು ನಂತರ ಉಡುಪಿ, ಚಿಕ್ಕಮಗಳೂರು ಮತ್ತು ಬೆಂಗಳೂರು ದಕ್ಷಿಣದಲ್ಲಿ ಸೇವೆ ಸಲ್ಲಿಸಿದ್ದರು. 2009ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ಇವರು ನಂತರ ತಮಿಳುನಾಡಿನಲ್ಲಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು.