ಕಡಬ ಟೈಮ್ಸ್, ಕೋಡಿಂಬಾಳ: ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹದ ದಫನ ಕಾರ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ನೆರವೇರಿಸಿದ್ದಾರೆ.
ಕಡಬ ಪ.ಪಂ ವ್ಯಾಪ್ತಿಯ ಕೋಡಿಂಬಾಳದ ವ್ಯಕ್ತಿ ಸೋಮವಾರ ಮೃತಪಟ್ಟಿದ್ದು, ಸರಕಾರದ ನಿಯಮಾವಳಿ ಮತ್ತು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಅಂತ್ಯ ಸಂಸ್ಕಾರವನ್ನು ಮಾಡಲಾಯಿತು.
ನಿಸಾರ್ ಕುದ್ರಡ್ಕ ನೇತೃತ್ವದಲ್ಲಿ ಪಾಪ್ಯುಲರ್ ಫ್ರಂಟ್ ತಂಡದ ಸಹಕಾರದಿಂದ ಮಯ್ಯತ್ ಪರಿಪಾಲನೆಯ ವಿಧಿ ವಿಧಾನಗಳನ್ನು ಅನುಸರಿಸಲಾಯಿತು. ಅಂತ್ಯಕ್ರಿಯೆಯ ಸಂಪೂರ್ಣ ಉಸ್ತುವಾರಿಯನ್ನು ಸಾದಿಕ್ ಅತ್ತಾಜೆ ವಹಿಸಿಕೊಂಡಿದ್ದರು. ಕೋಡಿಂಬಾಳ ಜಮಾಅತ್ ಆಡಳಿತ ಮಂಡಳಿಯ ಪದಾಧಿಕಾರಿಗಳು ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದರು.