ಕಡಬ ಟೈಮ್ಸ್, ಕಲ್ಲುಗುಡ್ಡೆ: ಕಡಬ ತಾಲೂಕಿನ ನೂಜಿಬಾಳ್ತಿಲ ಉ.ಹಿ.ಪ್ರಾ ಶಾಲೆಯಲ್ಲಿ ಸೆ.5ರಂದು ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಹಿರಿಯ ಪತ್ರಕರ್ತ ಖಾದರ್ ಸಾಹೇಬ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಲಕ್ಷ್ಮಣ ಗೌಡ ಸಾಂತ್ಯಡ್ಕ, ಅಧ್ಯಕ್ಷ ತೆ ವಹಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಸುಂದರಿ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಹಿರಿಯ ಶಿಕ್ಷಕಿ ಸಚಿದೇವಿ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಕಮಲಾಕ್ಷಿ ಬರೆಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಭಾಗವಹಿಸಿದ ಎಲ್ಲರೂ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರಈ ಶಾಲೆಯಲ್ಲಿ ಕಳೆದ 13 ವರ್ಷಗಳಿಂದ ಶಾರೀರಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ಪದೋನ್ನತಿ ಹೊಂದಿ ಕೊಣಾಲಿನ ಸರಕಾರಿ ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆಗೊಂಡ ಶಾರೀರಿಕ ಶಿಕ್ಷಕ ಬಾಲಕೃಷ್ಣಅವರಿಗೆ ಶುಭಹಾರೈಸಿದರು.