ಕಡಬ ಟೈಮ್ಸ್, ಮುಖ್ಯ ಸುದ್ದಿ: ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ಪ್ರತಿಭಾನ್ವಿತ ಶಿಕ್ಷರನ್ನೇ ಆಯ್ಕೆ ಮಾಡಿ ಉತ್ತಮ ಶಿಕ್ಷಣ ನೀಡುವ ಕೆಲಸವಾಗುತ್ತಿದೆ ಎಂದು.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಬುಧವಾರ ನೂಜಿಬಾಳ್ತಿಲ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಶಿಲ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ರಾಜ್ಯ ಬಜೆಟ್‌ನಲ್ಲಿ ೧೬ ರಿಂದ ೧೭ ಶೇ ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲಾಗುತ್ತಿದೆ, ಸ ರಕಾರಿ ಶಾಲೆಗಳ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದರಲ್ಲದೆ, , ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದ,ಕ ಜಿಲ್ಲೆ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಇದಕ್ಕೆ ನಮ್ಮ ಹಿರಿಯ ತ್ಯಾಗ ಹಾಗೂ ಶ್ರಮ ಇದೆ ಎಂದು ಹೇಳಿದರು .
ಸಮಾರಂಭದ ಅಧ್ಯಕ್ಷತೆವಹಿಸಿದ್ದ ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ ಸರಕಾರಿ ಶಾಲೆಗಳು ಮಧ್ಯಮ ಹಾಗೂ ಬಡ ವರ್ಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಯಶಸ್ವಿಯಾಗುತ್ತಿವೆ ಎಂದರು. ಜಿ.ಪಂ ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ ಕಡಬದಲ್ಲಿ ತಾ್. ಪಂ ಸಭೆ ಹಾಗೂ ಕೆ,ಡಿಪಿ ಸಭೆ ಕರೆಯಲು ಸಚಿವರು ಸೂಚನೆ ನೀಡಬೇಕು ಎಂದರು , ಕಡಬ ತಾಲೂಕು ಪಂಚಾಯಿತಿ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿ ಮೋನಪ್ಪ ಪೂಜಾರಿ ಮಾತನಾಡಿದರು.ವೇದಿಕೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು,ಅಧಿಕಾರಿಗಳು ಉಪಸ್ಥಿತರಿದ್ದರು.