Home ಪ್ರಮುಖ ಸುದ್ದಿ ಸುಬ್ರಹ್ಮಣ್ಯ: ಕುಕ್ಕೆ ದೇಗುಲದ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ವರ್ಗಾವಣೆ

ಸುಬ್ರಹ್ಮಣ್ಯ: ಕುಕ್ಕೆ ದೇಗುಲದ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ವರ್ಗಾವಣೆ

ಕಡಬ ಟೈಮ್ಸ್ (KADABA TIMES):ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಎಂ ಹೆಚ್ ಅವರನ್ನು ಮೈಸೂರು ಜಿಲ್ಲೆಯ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

UNIC-KADABA

ಈ ಹಿಂದೆ ಇವರು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ವರ್ಗಾವಣೆಗೊಂಡಿದ್ದರು. ಈ ಸಮಯದಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕಾರ್ಯ ನಿರ್ವಹಣಾಧಿಕಾರಿಯಾಗಿ ಪುತ್ತೂರು ಉಪ ವಿಭಾಗಾಧಿಕಾರಿಯವರು ಅಧಿಕಾರ ವಹಿಸಿಕೊಂಡಿದ್ದರು.ನಂತರದಲ್ಲಿ ರವೀಂದ್ರ ಅವರನ್ನು ಕುಕ್ಕೆ ಸುಬ್ರಹ್ಮಣ್ಯಕ್ಕೆ ಮರು ನಿಯೋಜನೆ ಮಾಡಲಾಗಿತ್ತು. ಇದೀಗ ಪುನಃ ಅವರನ್ನು ಮೈಸೂರಿಗೆ ವರ್ಗಾಯಿಸಲಾಗಿದೆ.

GURUJI ADD

ರವೀಂದ್ರ ಎಂ ಹೆಚ್ ಅವರ ಸ್ಥಾನಕ್ಕೆ ಬೆಂಗಳೂರು ಬನಶಂಕರಿಯಲ್ಲಿನ ಶ್ರೀ ಬನಶಂಕರಿ ದೇಗುಲದ ಕಾರ್ಯ ನಿರ್ವಾಹಣಾಧಿಕಾರಿ ನಿಂಗಯ್ಯ ಅವರನ್ನು ನಿಯೋಜನೆಗೊಳಿಸಿ ಸರ್ಕಾರ ಆದೇಶಿಸಿದೆ.

LEAVE A REPLY

Please enter your comment!
Please enter your name here