Home ಪ್ರಮುಖ ಸುದ್ದಿ ಕಡಬದ ಅಂಬೇಡ್ಕರ್ ಭವನದಲ್ಲಿ ಜ.26 ರಂದು ಕಾಂಗ್ರೆಸ್‌ ನೇತೃತ್ವದಲ್ಲಿ ರಕ್ತದಾನ ಶಿಬಿರ

ಕಡಬದ ಅಂಬೇಡ್ಕರ್ ಭವನದಲ್ಲಿ ಜ.26 ರಂದು ಕಾಂಗ್ರೆಸ್‌ ನೇತೃತ್ವದಲ್ಲಿ ರಕ್ತದಾನ ಶಿಬಿರ

ಕಡಬ ಟೈಮ್ಸ್(KADABA TIMES):ಕಡಬ: ದ.ಕ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಕಡಬ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ  ಜನವರಿ 26ನೇ ಗಣರಾಜ್ಯೋತ್ಸವದಂದು ದೇಶಕ್ಕಾಗಿ ಸಂವಿಧಾನ ಜೀವಕ್ಕಾಗಿ ರಕ್ತದಾನ ಎಂಬ ಧ್ಯೇಯದೊಂದಿಗೆ ಕಡಬ ಅಂಬೇಡ್ಕರ್ ಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

UNIC-KADABA

ಈ ಕುರಿತು  ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ  ಸೋಮವಾರ ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ   ಮಾತನಾಡಿ ಮಂಗಳೂರು ಬ್ಲಡ್ ಡೋನರ್‍ಸ್ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.   ಗಣರಾಜ್ಯೋತ್ಸವದಂದು ಕಡಬ ಅಂಬೇಡ್ಕರ್ ಸಭಾಭವನದಲ್ಲಿ  ಬೆಳಿಗ್ಗೆ ೮.೩೦ ರಿಂದ ಮಧ್ಯಾಹ್ನ ೧.೦೦ ಗಂಟೆಯ ತನಕ ನಡೆಯುವ ಶಿಬಿರವನ್ನು ಹಿರಿಯ ಕಾಂಗ್ರೆಸ್ ಮುಖಂಡ ಶೀನಪ್ಪ ಗೌಡ ಬೈತಡ್ಕ ಉದ್ಘಾಟಿಸಲಿದ್ದಾರೆ.

ಈ ಶಿಬಿರದಲ್ಲಿ ಯುವಕ, ಯುವತಿಯರು ಹಾಗೂ ಆರೋಗ್ಯವಂತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಿ ಆ ಮೂಲಕ ಸಾವಿರಾರು ಜನರ ಪ್ರಾಣ ಉಳಿಸುವ ಪುಣ್ಯದ ಕಾರ್ಯದಲ್ಲಿ ಪಾಲು ಪಡೆಯಬೇಕೆಂದು ವಿನಂತಿಸಿದ್ದಾರೆ.

GURUJI ADD

ಪತ್ರಿಕಾಗೋಷ್ಠಿಯಲ್ಲಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಫೈಝಲ್ ಎಸ್.ಇ.ಎಸ್, ಕಡಬ ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ಶೇಡಿಗುಂಡಿ, ಕಡಬ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ ನಾಕ್ ಮೇಲಿನಮನೆ, ಯುವ ಕಾಂಗ್ರೆಸ್ ಮುಖಂಡರಾದ ಮನೋಜ್ ಕೃಷ್ಣ ಬಳ್ಳೇರಿ, ಸತೀಶ್ ಮೀನಾಡಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here