ಕಡಬ :ಕಾರನ್ನು ಅಡ್ಡಗಟ್ಟಿ ದಂಪತಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿ, ಸ್ಕ್ರೂಡ್ರೈವರ್ ನಿಂದ ಹಲ್ಲೆ ನಡೆಸಲು ಪ್ರಯತ್ನಿಸಿರುವ ಘಟನೆ ಇಲ್ಲಿನ ಕೌಕ್ರಾಡಿ ಗ್ರಾಮದ ಆಲಂಪಾಡಿ ಎಂಬಲ್ಲಿ ನಡೆದಿದೆ.
ಜು. 29ರಂದು ಮಧ್ಯಾಹ್ನ ಮಹಿಳೆಯೊಬ್ಬರು ತನ್ನ ಗಂಡನ ಜೊತೆಯಲ್ಲಿ, ನೆಲ್ಯಾಡಿಯಿಂದ ಮನೆ ಕಡೆಗೆ ಹೋಗುತ್ತಿದ್ದಾಗ ಕಡಬ ತಾಲೂಕು, ಕೌಕ್ರಾಡಿ ಗ್ರಾಮದ ಆಲಂಪಾಡಿ ಎಂಬಲ್ಲಿಗೆ ತಲುಪುತ್ತಿದ್ದಂತೆ, ನಾಸೀರ್ ಎಂಬಾತನು ಏಕಾಏಕಿ ಅವರು ಹೋಗುತ್ತಿದ್ದ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾನೆ
ಎನ್ನಲಾಗಿದೆ.
ಬಳಿಕ ಕಾರಿನ ಡೋರ್ ನ ಬಳಿ ಬಂದು ಅನುಚಿತವಾಗಿ ವರ್ತಿಸಿ, ಸ್ಕ್ರೂಡ್ರೈವರ್ ನಿಂದ ಹಲ್ಲೆ ನಡೆಸಲು ಪ್ರಯತ್ನಿಸಿರುವುದಾಗಿದೆ.
ಮಹಿಳೆಯ ಗಂಡ ಕಾರಿನಿಂದ ಇಳಿದಾಗ ಗಂಡನನ್ನು ದೂಡಿ ಹಾಕಿ ಸ್ಕ್ರೂಡ್ರೈವರ್ ನಿಂದ ಹಲ್ಲೆ ನಡೆಸಲು ಮುಂದಾಗಿರುತ್ತಾನೆ ಎಂಬುದಾಗಿ ಮಹಿಳೆ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 93/2024
ಕಲಂ: 126(2),352,351(2),74, 115(2) BNS 2023 ರಂತೆ ಪ್ರಕರಣ ದಾಖಲಾಗಿದೆ.