ಕಡಬ ಟೈಮ್: ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಹಾಸನದ ಮಂಗಳೂರು ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಕಡಬ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳಿಬ್ಬರು ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಾಥಮಿಕ ವಿಭಾಗದ ಏಳನೇ ತರಗತಿಯ ಹೇಮಂತ್ ಎಂ.ಎ ಮತ್ತು ಚೈತ್ರೇಶ್ ಆಂಧ್ರಪ್ರದೇಶದಲ್ಲಿ ನಡೆಯುವ ಕ್ಷೇತ್ರಿಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರಿಗೆ ಶಿಕ್ಷಕರಾದ ಶಿವಪ್ರಸಾದ್ ಹಾಗೂ ನಾಗೇಶ್ ತರಬೇತಿಯನ್ನು ನೀಡಿದ್ದಾರೆ.