ಕಡಬ ಟೈಮ್ಸ್: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಯಿಲ ಶಾಖಾ ಕಚೇರಿಯ ಭದ್ರತಾ ಸಿಬಂದಿಯೊಬ್ಬರು ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ವರದಿಯಾಗಿದೆ.
ಕೊಯಿಲ
ಗ್ರಾಮದ ಕೆರೆಕೋಡಿ ನಿವಾಸಿ ವರದರಾಜ
ಶೆಟ್ಟಿ (45) ಅವರು ಕರ್ತವ್ಯನಿರತರಾಗಿದ್ದಾಗಲೇ ಮೃತಪಟ್ಟವರು.
ಆ.
17ರಂದು ರಾತ್ರಿ 8 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಿದ್ದ ಅವರು ಮರುದಿನ ಬೆಳಗ್ಗೆ 6 ಗಂಟೆಯ ತನಕ ಕರ್ತವ್ಯ ನಿರ್ವಹಿಸಬೇಕಿತ್ತು. ಆದರೆ
ಬೆಳಗ್ಗೆ ಸ್ಥಳೀಯರು ಬಂದು ನೋಡಿದಾಗ ಅವರು ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಕೂಡಲೇ
ಅವರನ್ನು ಆ್ಯಂಬುಲೆನ್ಸ್ ಮೂಲಕ ಕಡಬ ಸರಕಾರಿ ಸಮುದಾಯ ಆಸ್ಪತ್ರೆಗೆ ಕರೆತಂದು ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದನ್ನು ದೃಢಪಡಿಸಿದರು.
ಯಾವುದೋ
ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿರಬಹುದು ಎಂದು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮನೋಹರ ಪ್ರಕಾಶ್ ಡಿ. ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ . ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.