ಕಡಬ
ಟೈಮ್ಸ್ : ಆಹಾರ ಅರಸಿ
ನಾಡಿಗೆ ಬಂದ ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ.
ಭದ್ರಾ
ಅಭಯಾರಣ್ಯದಿಂದ ಆಹಾರ ಅರಸಿ ಬಂದಿದ್ದ ಕಾಡಾನೆ ಬೇಲಿ ದಾಟುವ ವೇಳೆ ಇಲ್ಲಿನ ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ.
ಸ್ಥಳಕ್ಕೆ ಅರಣ್ಯ
ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದು ತೋಟದ ಮಾಲೀಕರ ವಿರುದ್ಧ ಪ್ರಕರಣ ದಾಖಲುಗೊಂಡಿದೆ.
ಈ ಸುದ್ದಿಯನ್ನೂ ಓದಿರಿ:ಕಡಬ:ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಪ್ರಾಣ ಕಳೆದು ಕೊಂಡ ಬೈಕ್ ಸವಾರ