ಕಡಬ : ಬೆಂಗಳೂರಿನಲ್ಲಿ ಬೇಕರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ರಾಮಕುಂಜ ಯುವಕನೊಬ್ಬ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದ ಬಗ್ಗೆ ವರದಿಯಾಗಿದೆ.
ಕಡಬ ತಾಲೂಕು ರಾಮಕುಂಜ ಗ್ರಾಮದ ಬರಮೇಲು ನಿವಾಸಿ ಯಶೋಧರ (36ವ.)ಮೃತ ವ್ಯುವಕ ಅವರು ಆ.8ರಂದು ರಾತ್ರಿ ಅಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.
ಊರಿಗೆ ಬಂದಿದ್ದ ಯಶೋಧರ ಅವರು 10 ದಿನದ ಹಿಂದೆಯಷ್ಟೇ ಮತ್ತೆ ಬೆಂಗಳೂರಿಗೆ ತೆರಳಿದ್ದರು. ಅಲ್ಲಿ ಹಠಾತ್ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಚಿಕಿತ್ಸೆ ಪಡೆದುಕೊಂಡರೂ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಮನೆಯವರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶೋಧರ ಆ.9ರಂದು ಮುಂಜಾನೆ ವೇಳೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.
ಮೃತದೇಹವನ್ನು ರಾಮಕುಂಜದ ಮನೆಗೆ ತಂದು ಅಂತ್ಯಕ್ರಿಯೆ ನಡೆಸಲಾಗಿದೆ. ಮೃತರ ಮನೆಗೆ ರಾಮಕುಂಜ ಗ್ರಾ.ಪಂ.ಉಪಾಧ್ಯಕ್ಷ ಕೇಶವ ಗಾಂಧಿಪೇಟೆ, ಸದಸ್ಯರಾದ ಪ್ರಶಾಂತ್ ಆರ್.ಕೆ., ಸೂರಪ್ಪ ಕುಲಾಲ್ ಮತ್ತಿತರರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.