Home ಪ್ರಮುಖ ಸುದ್ದಿ ನಕಲಿ ನೋಟ್ ಮುದ್ರಿಸುತ್ತಿದ್ದ ಗ್ಯಾಂಗ್ ನಲ್ಲಿ ಕಡಬದ ವ್ಯಕ್ತಿ: ನಾಲ್ವರು ಅರೆಸ್ಟ್, ನೋಟುಗಳು...

ನಕಲಿ ನೋಟ್ ಮುದ್ರಿಸುತ್ತಿದ್ದ ಗ್ಯಾಂಗ್ ನಲ್ಲಿ ಕಡಬದ ವ್ಯಕ್ತಿ: ನಾಲ್ವರು ಅರೆಸ್ಟ್, ನೋಟುಗಳು ವಶಕ್ಕೆ

1
0

 ಕಡಬ ಟೈಮ್:  ನಕಲಿ
ನೋಟು ಮುದ್ರಿಸುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಅವರಿಂದ 500 ರೂಪಾಯಿ ಮುಖಬೆಲೆಯ 2,13,500 ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

UNIC-KADABA


ಖಚಿತ
ಮಾಹಿತಿ ಮೇರೆಗೆ ಸೋಮವಾರ ಬೆಳಗ್ಗೆ ಮಂಗಳೂರಿನ ಹಂಪನಕಟ್ಟೆಯ ಲಾಡ್ಜ್ನಲ್ಲಿ ನಕಲಿ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ವೇಳೆ ಬಂಧಿಸಲಾಗಿದೆ.


ಆರೋಪಿಗಳನ್ನು
ಕೇರಳದ ಕಾಸರಗೋಡಿನ ವಿ ಪ್ರಿಯೇಶ್ (38), ವಿನೋದ್
ಕುಮಾರ್ ಕೆ (33), ಅಬ್ದುಲ್ ಖಾದರ್ ಎಸ್ ಎಂ (58) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬೆಳಿಯೂರು ಕಟ್ಟೆಯ ಅಯೂಬ್ ಖಾನ್ (51) ಎಂದು ಗುರುತಿಸಲಾಗಿದೆ.

ಕಾಸರಗೋಡಿನ
ಚೆರ್ಕಳದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪ್ರಮುಖ ಆರೋಪಿ ಪ್ರಿಯೇಶ್ ಸಾಲದ ಸುಳಿಯಲ್ಲಿ ಸಿಲುಕಿದ್ದು, ಸಾಲ ತೀರಿಸಲು ನಕಲಿ ನೋಟುಗಳನ್ನು ಮುದ್ರಿಸಲು ಮುಂದಾಗಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

GURUJI ADD


ಆನ್ಲೈನ್
ಮೂಲಕ ಕೋಝಿಕ್ಕೋಡ್ ಮತ್ತು ದೆಹಲಿಯಿಂದ ಕಚ್ಚಾ ವಸ್ತುಗಳನ್ನು ಖರೀದಿಸಿದ್ದ ಪ್ರಿಯೇಶ್, ಯುಟ್ಯೂಬ್ ಮೂಲಕ ನಕಲಿ ಕರೆನ್ಸಿ ಮುದ್ರಿಸುವುದನ್ನು ಕಲಿತಿದ್ದಾರೆ. ಕಳೆದ ಮೂರು ತಿಂಗಳಿಂದ ಚೆರ್ಕಳದಲ್ಲಿರುವ ತನ್ನ ಪ್ರಿಂಟಿಂಗ್ ಪ್ರೆಸ್ ನಲ್ಲಿ ಪ್ರಿಯೇಶ್ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಪ್ರಮುಖ
ಆರೋಪಿ ಪ್ರಿ ಕಾಸರಗೋಡು ಜಿಲ್ಲೆಯ ಚೆರ್ಕಳದಲ್ಲಿ ಪ್ರಿಟಿಂಗ್ ಪ್ರೆಸ್ ಇಟ್ಟುಕೊಂಡಿದ್ದ ಅಲ್ಲಿ ಖೋಟಾ ನೋಟು ಮುದ್ರಿಸುತ್ತಿದ್ದ. ಅದಕ್ಕೆ ಬೇಕಾದ ಕಚ್ಚಾ ಸಾಮಾಗ್ರಿಗಳನ್ನು ಕೇರಳದ ಕೋಯಿಕ್ಕೋಡ್ ಮತ್ತು ದೆಹಲಿಯಿಂದ ಖರೀದಿಸಿದ್ದ. ಆರೋಪಿಯು ಖೋಟಾ ನೋಟುಗಳನ್ನು ತಯಾರಿಸುವ ವಿಧಾನವನ್ನು ಯೂಟ್ಯೂಬ್ನಲ್ಲಿ ವೀಕ್ಷಿಸಿದ್ದ. ಸಾಲದ ಸುಳಿಗೆ ಸಿಲುಕಿದ್ದ ಆತ ಸುಲಭದಲ್ಲಿ ಹಣ
ಸಂಪಾದಿಸುವ ಉದ್ದೇಶದಿಂದ ನಾಲ್ಕು ತಿಂಗಳಿನಿಂದ ಕೃತ್ಯದಲ್ಲಿ ತೊಡಗಿದ್ದ.

ಆತನಿಗೆ
ವಿನೋದ್ ಪರಿಚಯವಿತ್ತು. ವಿನೋದ್ ಮೂಲಕ ಅಬ್ದುಲ್ ಖಾದರ್ ಹಾಗೂ ಆತನ ಮೂಲಕ ಆಯೂಬ್ ಖಾನ್ ಪರಿಚಯವಾಗಿದ್ದರು. ಆರೋಪಿಗಳು ಖೋಟಾ ನೋಟುಗಳನ್ನು ಪ್ರಿಯೇಶ್ನಿಂದ ತರಿಸಿಕೊಂಡು ನಗರದಲ್ಲಿ ಚಲಾವಣೆ ಮಾಡಲು ಯತ್ನಿಸಿದ್ದರು. ಪ್ರಿಯೇಶ್ ₹ 25 ಸಾವಿರ ಪಡೆದು, ಪ್ರತಿಯಾಗಿ ₹ 500 ಮುಖ ಬೆಲೆಯ ಖೋಟಾ ನೋಟು (₹1 ಲಕ್ಷ ) ನೀಡಲು ಒಪ್ಪಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅವರು
ಮುದ್ರಿಸಿದ್ದ ಖೋಟಾ ನೋಟುಗಳು ಅಸಲಿ ನೋಟಿನಂತೆಯೇ ತೋರುತ್ತಿವೆ. ಅದನ್ನು ಬರಿಗಣ್ಣಿನಲ್ಲಿ ಪತ್ತೆಹಚ್ಚುವುದು ಬಹಳ ಕಷ್ಟ. ಗುಣಮಟ್ಟದ ಕಾಗದ ಹಾಗೂ ಶಾಯಿಯನ್ನು ಬಳಸಿ ಅವುಗಳನ್ನು ಮುದ್ರಿಸಲಾಗಿದೆ. ಆದರೆ ನೋಟು ಎಣಿಸುವ ಯಂತ್ರಗಳಿಂದ ಅವುಗಳನ್ನು ಪತ್ತೆ ಹಚ್ಚಬಹುದು. ಜಾಲದಲ್ಲಿ ಇನ್ನಷ್ಟು
ಮಂದಿ ಭಾಗಿಯಾಗಿರುವ ಸಾಧ್ಯತೆ ಇದೆ. ನಿಟ್ಟಿನಲ್ಲಿ ತನಿಖೆ
ಕೈಗೊಳ್ಳಲಿದ್ದೇವೆಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here