ಕಡಬ ಟೈಮ್ಸ್, ಅಪರಿಚಿತ
ವ್ಯಕ್ತಿಯ ಮೃತದೇಹವೊಂದು ನೇತ್ರಾವತಿ ನದಿಯಲ್ಲಿ ತೇಲಿ ಹೋದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.
ಉಪ್ಪಿನಂಗಡಿ
ಬಸ್ ನಿಲ್ದಾಣ ಬಳಿಯ ನೇತ್ರಾವತಿ ಸೇತುವೆಯ ಮೇಲಿನಿಂದ ಸಾರ್ವಜನಿಕರು ನೋಡಿದ್ದು, ಬಳಿಕ ಈ
ಬಗ್ಗೆ ಉಪ್ಪಿನಂಗಡಿ ದೇವಾಲಯದ ಬಳಿಯಿರುವ ಗೃಹರಕ್ಷಕದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದಾರೆ.
ನೇತ್ರಾವತಿ ನದಿಯಲ್ಲಿ ತೇಲಿ ಹೋಗುತ್ತಿರುವ ಮೃತದೇಹ |
ನದಿಯಲ್ಲಿ
ನೀರಿನ ಮಟ್ಟ ಕಡಿಮೆ ಇರುವುದರಿಂದ ಪ್ರವಾಹ ರಕ್ಷಣಾ ತಂಡದವರಿಗೆ ದೋಣಿಗೆ ಒಬಿಎಂ ಸಿಕ್ಕಿಸಿ ದೋಣಿ ಚಲಾಯಿಸಲು ಸಾಧ್ಯವಾಗದಿರುವುದರಿಂದ ಅವರ ಕೈಗೂ ಮೃತದೇಹ ಸಿಗದೆ ನೀರಿನಲ್ಲಿ ತೇಲಿಕೊಂಡು ಹೋಗಿದೆ ಎಂದು ತಿಳಿದು ಬಂದಿದೆ.
ನೀಲಿ
ಬಣ್ಣದ ಒಳ ಉಡುಪನ್ನು ತೊಟ್ಟಿರುವ
ಗಂಡಸಿನ ಮೃತದೇಹ ಎಂದು ಶಂಕಿಸಲಾಗಿದೆ.