ಕಡಬ
ಟೈಮ್ಸ್ :ಬಜರಂಗದಳದಲ್ಲಿ ಸಕ್ರಿಯನಾಗಿದ್ದ ಯುವಕನೊಬ್ಬ ಮರವೊಂದಕ್ಕೆ ಕೇಸರಿ ಶಾಲು ಬಿಗಿದು ನೇಣು ಹಾಕಿಕೊಂಡ ಬಗ್ಗೆ ವರದಿಯಾಗಿದೆ.
ಪುತ್ತೂರು
ತಾಲೂಕು ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿ ಸಚಿನ್ ಕೆಯ್ಯೂರು ಆತ್ಮಹತ್ಯೆ ಮಾಡಿಕೊಂಡವರು.
ಕೊಯ್ಯೂರು
ಘಟಕದ ಸುರಕ್ಷಾ ಪ್ರಮುಖ್ ಆಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು. ಬಿಸಿಎ
ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದ ಇವರು ಉದ್ಯೋಗದ
ಹುಡುಕಾಟದಲ್ಲಿದ್ದರು ಎಂದು ತಿಳಿದು ಬಂದಿದೆ.
ಗ್ರಾಮದ ಪಂಚಾಯತ್ ಸಮೀಪ ಗೇರು ಮರವೊಂದಕ್ಕೆ ಕೇಸರಿ ಶಾಲು ಬಿಗಿದು ನೇಣು ಹಾಕಿಕೊಂಡಿದ್ದಾರೆ. ಅತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.