ಕಡಬ ಟೈಮ್: ಸೌಜನ್ಯ
ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ
ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಇಂದು
ಮಹತ್ವದ ತೀರ್ಪು ನೀಡಿದೆ.
ಪ್ರಕರಣಕ್ಕೆ
ಸಂಬಂಧಿಸಿದಂತೆ ಮೂರು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ,ಪ್ರಕರಣದ ಮರುತನಿಖೆ ಕೋರಿ ಸೌಜನ್ಯ ಪೋಷಕರು ಸಲ್ಲಿಸಿದ್ದ ಅರ್ಜಿ ಹಾಗೇ ಆರೋಪಿ ಸಂತೋಷ್ ರಾವ್ ಅಕ್ರಮ ಬಂಧನಕ್ಕೆ ಪರಿಹಾರ ಕೋರಿದ್ದ ಅರ್ಜಿ ಈ ಮೂರು ಅರ್ಜಿಯನ್ನು
ಹೈಕೋರ್ಟ್ ವಜಾಗೊಳಿಸಿದೆ.
ಈ
ಮೂಲಕ ಚಂದಪ್ಪಗೌಡ, ಸಂತೋಷ್ ರಾವ್, ಸಿಬಿಐ ಈ ಮೂವರು ಸಲ್ಲಿಸಿದ್ದ
ಅರ್ಜಿಗಳು ವಜಾಗೊಂಡಿದೆ. ಇನ್ನು
ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿದ್ದ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದೆ.