Home ಪ್ರಮುಖ ಸುದ್ದಿ ಕಡಬದ ಕೊಯಿಲದಲ್ಲಿರುವ ಪಶು ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಸರ್ಕಾರದಿಂದ ಕ್ರಮ

ಕಡಬದ ಕೊಯಿಲದಲ್ಲಿರುವ ಪಶು ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಸರ್ಕಾರದಿಂದ ಕ್ರಮ

UNIC-KADABA

 ಕಡಬ: 2025
ಸೆಪ್ಟೆಂಬರ್ ತಿಂಗಳಿನಲ್ಲಿ ಕಡಬದ ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭವಾಗಲಿದೆ  ಎಂದು ಪುತ್ತೂರು ಶಾಸಕರಾದ ಅಶೋಕ್ ರೈಅವರು ತಿಳಿಸಿದ್ದಾರೆ.


ಶುಕ್ರವಾರ ಬೆಂಗಳೂರಿನಲ್ಲಿ ಪಶು ಸಂಗೋಪನಾ ಇಲಾಖೆಯ ಪ್ರಮುಖರನ್ನು ಭೇಟಿಯಾದ ಶಾಸಕರು ಕೊಯಿಲಾ ಪಶು ವೈದ್ಯಕೀಯ ಕಾಲೇಜಿನ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

GURUJI ADD


ಈಗಾಗಲೇ ಅಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಖಾಲಿ ಬಿದ್ದಿದೆ, ಇದೇ ಕಟ್ಟಡವನ್ನು ನವೀಕರಣ ಮಾಡಿ ಮೂಲ ಭೂತ ಸೌಕರ್ಯಗಳಿಗಗಿ
ಸರಕಾರ ತಕ್ಷಣ ಅನುದಾನವನ್ನು ಬಿಡುಗಡೆ ಮಾಡಬೇಕು ಮತ್ತು ಒಂದು ವರ್ಷದೊಳಗೆ ಕಾಲೇಜು ಪ್ರಾರಂಭವಾಗಬೇಕು ಎಂದು ಶಾಸಕರು ಮನವಿ ಮಾಡಿದ್ದರು. ಮನವಿಗೆ ಸ್ಪಂದನೆ ನೀಡಿದ ಪಶುಸಂಗಹೋಪನಾ
ಸಚಿವಾಲಯ ಬಗ್ಗೆ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅಧಿಕಾರಿಗಳು ಶಾಸಕರಿಗೆ ತಿಳಿಸಿದ್ದಾರೆ

ಹೊರ ಗುತ್ತಿಗೆ ಆಧಾರದಲ್ಲಿ ಹಸು, ಕುರಿ ಮತ್ತು ಹಂದಿ ಸಾಕಾಣಿಕೆಗೆ ಅವಕಾಶ: ಕೊಯಿಲದಲ್ಲಿರುವ ವಿಸ್ತಾರವಾದ ಜಾಗದಲ್ಲಿ ಪಶು ವೈದ್ಯಕೀಯ ಕಾಲೇಜಿಗೆ ಪೂರಕವಾಗಿ ಇರಬೇಕಾದ ಅಗತ್ಯಕ್ರಮಗಳನ್ನು ಮಾಡಿಕೊಳ್ಳುವುದರ ಜೊತೆ ಹೊರ ಗುತ್ತಿಗೆ ಆಧಾರದಲ್ಲಿ ಸ್ಥಳದಲ್ಲಿ ಹಸು, ಕುರಿ ಮತ್ತು ಹಂದಿ ಸಾಕಾಣಿಕೆಗೆ ಅವಕಾಶ ನೀಡುವಂತೆ ಶಾಸಕರು ಮನವಿ ಮಾಡಿದ್ದರು.
ಮನವಿಗೆ ಇಲಾಖೆ ಸ್ಪಂದಿಸಿದ್ದು ಹೊರ ಗುತ್ತಿಗೆ ಆಧಾರದಲ್ಲಿ ಹಸು, ಕುರಿ ಮತ್ತು ಹಂದಿ ಸಾಕಾಣಿಕೆಗೆ ಅವಕಾಶವನ್ನು ಕಲ್ಪಿಸಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕೊಯಿಲಾ ಜಾನುವಾರ ಕೇಂದ್ರದ ಕಟ್ಟಡದಲ್ಲಿ ಮುಂದಿನ ಒಂದು ವರ್ಷದೊಳಗೆ ಪಶು ವೈಧ್ಯಕೀಯ ಕಾಲೇಜು ಆರಂಭವಾಗವುದರೊಂದಿಗೆ
ಭಾಗದ ಕನಸು ನನಸಾಗಲಿದೆ.

ಶಾಸಕನಾದ ಆರಂಭದಲ್ಲೇ ಕೊಯಿಲಾ ಜಾನುವಾರು ಕೇಂದ್ರದಲ್ಲಿ ಪಶು ವೈಧ್ಯಕೀಯ ಕಾಲೇಜು ಪ್ರಾರಂಭವಾಗಬೇಕು ಎಂದು ಕನಸು ಕಂಡಿದ್ದೆ,
ಕನಸು ನನಸಾಗುವ ಕಾಲ ಬಂದಿದೆ. ಅಲ್ಲಿ ಅಗತ್ಯವಾಗಿ ಬೇಕಾದ ಎಲ್ಲಾ ಮೂಲಭೂತ ವ್ಯವಸ್ಥೆಗಳನ್ನು ಸರಕಾರ ಮಾಡಲಿದೆ ಮತ್ತು ಹಸು, ಹಂದಿ ಮತ್ತು ಕುರಿ ಸಾಕಾಣಿಕೆಗೂ ಅವಕಾಶವನ್ನು ಕಲ್ಪಿಸುವ ಮೂಲಕ ನನ್ನ ಬೇಡಿಕೆಯನ್ನು ಸರಕಾರ ಮಾನ್ಯ ಮಾಡಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ಸೆಪ್ಟೆಂಬರ್ ತಿಂಗಳಿನಲ್ಲಿ ಸಿ ಎಂ ಸಿದ್ದರಾಮಯ್ಯ ಅವರೇ ಕೊಯಿಲ ಪಶುವೈದ್ಯಕೀಯ ಕಾಲೇಜನ್ನು ಉದ್ಘಾಟನೆ ಮಾಡಲಿದ್ದಾರೆ. ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here