ಕಡಬ:
ಕುಂತೂರುಪದವು ಸಂತಜಾರ್ಜ್ ಅನುದಾನಿತ ಪ್ರೌಢಶಾಲೆಯಲ್ಲಿ ನವಂಬರ್ 30 ನಡೆಯಲಿರುವ ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ
ಸಮ್ಮೇಳನದ ಅಂಗವಾಗಿ ವಿದ್ಯಾರ್ಥಿಗಳಿಂದ ಕವನ ಹಾಗೂ ಪ್ರಬಂಧ ಆಹ್ವಾನಿಸಲಾಗಿದೆ.
5ನೇ ತರಗತಿ ಕೆಳಗಿನ ವಿದ್ಯಾರ್ಥಿಗಳಿಗೆ, 6,7ನೇ ತರಗತಿ ವಿದ್ಯಾರ್ಥಿಗಳಿಗೆ,
8,9,10ನೇ ತರಗತಿ ವಿದ್ಯಾರ್ಥಿಗಳಿಗೆ, ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಒಟ್ಟು 5 ವಿಭಾಗಗಳಲ್ಲಿ ಪ್ರತ್ಯೇಕವಾಗಿ ಕವನ ಹಾಗೂ ಪ್ರಬಂಧ ಸ್ಪರ್ಧೆ ನಡೆಯಲಿದೆ.
ಪ್ರಬಂಧ ಸ್ಪರ್ಧೆ ವಿಷಯ: ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಪಾತ್ರ. 100
ಶಬ್ದ ಮೀರಿರಬಾರದು. ವಿದ್ಯಾರ್ಥಿಗಳು ಶಾಲಾ ಮುಖ್ಯಸ್ಥರ ದೃಢೀಕರಣದೊಂದಿಗೆ ನ.10ರೊಳಗೆ ಕೆ.ಸೇಸಪ್ಪ ರೈ, ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು, ಕಡಬ ತಾಲೂಕು ಘಟಕ ಅಂಚೆ: ರಾಮಕುಂಜ, ಕಡಬ ತಾಲೂಕು ದ.ಕ.
574241ಇವರಿಗೆ ಕಳಿಸಿಕೊಡಬೇಕು.
5 ವಿಭಾಗಗಳಲ್ಲೂ ಪ್ರಥಮ ಹಾಗೂ ದ್ವಿತೀಯ ಬಹುಮಾನವನ್ನು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡಲಾಗುವುದು. ಪ್ರಬಂಧದ ಜೊತೆಗೆ ತಮ್ಮ ಮೊಬೈಲ್ ನಂಬರ್ ನಮೂದಿಸಿ. ಹೆಚ್ಚಿನ ಮಾಹಿತಿಗಾಗಿ ಮೊ: 9663755105ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.