ಮಂಗಳೂರು:ಸೂರತ್ಕಲ್ ಸಮೀಪದ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಅಪರಿಚಿತರು ಕಲ್ಲು ತೂರಾಟ ನಡೆಸಿದ ಘಟನೆ ಸೆ.15 ರವಿವಾರ ರಾತ್ರಿ 11ಗಂಟೆ ಸುಮಾರಿಗೆ ನಡೆದಿದೆ.
ಸುರತ್ಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್ ವಶಕ್ಕೆ ಪಡೆದುಕೊಂಡು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಈದ್ ಮಿಲಾದ್ ಪ್ರಯುಕ್ತ ಹಲವು ಭಾಗಗಳಲ್ಲಿ ನಾಳೆ ಮೆರವಣಿಗೆ ಇರುವುದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.