Home ಪ್ರಮುಖ ಸುದ್ದಿ ದಕ್ಷಿಣ ಕನ್ನಡ: ಮಸೀದಿಗೆ ಕಲ್ಲೆಸೆತ ಪ್ರಕರಣ:ವಾಹನ ಸಹಿತ ಆರು ಮಂದಿ ಆರೋಪಿಗಳ ಬಂಧನ

ದಕ್ಷಿಣ ಕನ್ನಡ: ಮಸೀದಿಗೆ ಕಲ್ಲೆಸೆತ ಪ್ರಕರಣ:ವಾಹನ ಸಹಿತ ಆರು ಮಂದಿ ಆರೋಪಿಗಳ ಬಂಧನ

1
0
ಮಂಗಳೂರು: ಕೃಷ್ಣಾಪುರ ಮುಸ್ಲಿಮ್ ಜಮಾಅತ್ ಗೆ ಒಳಪಡುವ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಟಿದುಲ್‌ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು ಮತ್ತು ಮುಂಚೂರು ನಿವಾಸಿ ಸುಜಿತ್‌ ಎಂಬವರು ಬಂಧಿತ ಆರೋಪಿಗಳೆಂದು ತಿಳಿದುಬಂದಿದೆ..
ಆರೋಪಿಗಳ ಪೈಕಿ ಭರತ್ ಎಂಬಾತನ ವಿರುದ್ಧ ಹೊಡೆದಾಟಕ್ಕೆ ಸಂಬಂಧಿಸಿ 307 ಪ್ರಕರಣ ದಾಖಲಾಗಿದ್ದು, ಆತನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿತ್ತು.
ಕಳೆದ ರಾತ್ರಿ ಜನತಾ ಕಾಲನಿ ಸ್ಮಶಾನದ ಕಡೆಯಿಂದ ಎರಡು ಬೈಕ್ ಗಳಲ್ಲಿ ಬಂದ ಕಿಡಿಗೇಡಿಗಳು ಮಸೀದಿಯ ಹಿಂಭಾಗದ ಕಿಟಕಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದರು.
ಬಳಿಕ ಒಂದು ಬೈಕ್ ನಲ್ಲಿದ್ದ ಮೂವರು ಗಣೇಶ ಕಟ್ಟೆಯ ಕಡೆ ತೆರಳಿದ್ದರೆ, ಇನ್ನೊಂದು ಬೈಕ್ ನಲ್ಲಿದ್ದ ಇಬ್ಬರು ಬೈಕ್‌ ತಿರುಗಿಸಿಕೊಂಡು ವಾಪಸ್ ಸ್ಮಶಾನದ ಕಡೆಗೆ ಪರಾರಿಯಾಗಿದ್ದರು.

LEAVE A REPLY

Please enter your comment!
Please enter your name here