ಕಡಬ ಟೈಮ್ಸ್ ಸುಳ್ಯ: ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಕಿರುಕುಳ ನೀಡಿದ ಆರೋಪದಲ್ಲಿ ಥಳಿತಕ್ಕೆ ಒಳಗಾಗಿ ಕೇರಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನ್ನು ಬುಧವಾರ ಸಂಜೆ ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಬಳಿಕ ಯುವಕನಿಗೆ ಗುಂಪೊಂದು ಥಳಿಸಿದ ಕಾರಣ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಬಳಿಕ ಅಲ್ಲಿಂದ ತೆರಳಿ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.
ಈತನನ್ನು ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆ ವತಿಯಿಂದ ಮಂಗಳವಾರ ಸುಳ್ಯ ಪೊಲೀಸ್ ಠಾಣಾ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಗ್ರಹಿಸಲಾಗಿತ್ತು.
ಇದೀಗ ಸುಳ್ಯ ಪೋಲಿಸ್ ಅಧಿಕಾರಿಗಳು ಆರೋಪಿತ ನಿಯಾಜ್ ನನ್ನು ಬಂಧಿಸಿ ಕರೆತಂದಿದ್ದು ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎನ್ನಲಾಗಿದೆ.ಹೆಚ್ಚಿನ ಮಾಹಿತಿ ಲಭಿಸಿಲ್ಲ.