Home ಪ್ರಮುಖ ಸುದ್ದಿ ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್...

ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದೇನು?

 ಸುಳ್ಯ: ಅಭಿವೃದ್ಧಿಗೆ ರಾಜ್ಯ ಸರಕಾರ ಯಾವುದೇ ಅನುದಾನ ನೀಡುತ್ತಿಲ್ಲ, ರಾಜ್ಯದ ಅಭಿವೃದ್ಧಿಗೆ ಗಮನ ಕೊಡದ ಸರಕಾರ ಹಗರಣದಲ್ಲಿಮುಳುಗಿದೆ ಎಂದು ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.ಸೆ.9 ರಂದು ಸುಳ್ಯದ
ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆದ  ಬಿಜೆಪಿ ಸುಳ್ಯ
ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.  

UNIC-KADABA


ಕಾಂಗ್ರೆಸ್
ಸರಕಾರದಿಂದ
ಅಭಿವೃದ್ಧಿ
ಹಾಗೂ ಜನಪರ ಕೆಲಸ‌‌ ಮಾಡಲು ಸಾಧ್ಯವಾಗುತ್ತಿಲ್ಲ  ಎಂದ ಅವರು, 
ಸಂಘಟನಾತ್ಮಕಕ
ಕೆಲಸಕ್ಕೆ
ರಾಜ್ಯದಲ್ಲಿ ಮಾತ್ರವಲ್ಲದೆ, ದೇಶಕ್ಕೆ ಸುಳ್ಯ ಮಂಡಲ ಮಾದರಿ ಎಂದು ಅವರು ಹೇಳಿದರು.  ಸದಸ್ಯತ್ವ
ಅಭಿಯಾನವನ್ನು  ಯಶಸ್ವಿ
ಮಾಡಬೇಕೆಂದು  ಎಂದು
ಕಾರ್ಯಕರ್ತರಿಗೆ ಕರೆ ನೀಡಿದರು.


GURUJI ADD

ಬಿಜೆಪಿ
ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರನ್ನು ಸನ್ಮಾನಿಸಲಾಯಿತು. ಲೋಕಸಭಾ ಚುನಾವಣೆಯ ಉಸ್ತುವಾರಿ ಹರೀಶ್ ಕಂಜಿಪಿಲಿ, ವಿವಿಧ ಮಹಾಶಕ್ತಿ ಕೇಂದ್ರದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.


ಶಾಸಕಿ
ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ, ಬಿಜೆಪಿ ಉಪಾಧ್ಯಕ್ಷ  ರವೀಂದ್ರ
ಶೆಟ್ಟಿ ಉಳಿದೊಟ್ಟು, ರಾಕೇಶ್ ರೈ ಕೆಡೆಂಜಿ, ಪ್ರಧಾನ
ಕಾರ್ಯದರ್ಶಿ ಯತೀಶ್ ಆರ್ವಾರ್, ಜಿಲ್ಲಾ ಕಾರ್ಯದರ್ಶಿ ಕುಮಾರ್ ಮುಳುಗಾಡು, ಮಂಡಲ ಪ್ರಭಾರಿ ಅಪ್ಪಯ್ಯ ಮಣಿಯಾಣಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನಯಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಕೋಶಾಧಿಕಾರಿ
ಸುಬೋದ್ ಶೆಟ್ಟಿಮೇನಾಲ, ಮಂಡಲದ ಮಾಜಿ ಅಧ್ಯಕ್ಷರಾದ ಎಸ್.ಎನ್.ಮನ್ಮಥ,
ಹರೀಶ್ ಕಂಜಿಪಿಲಿ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಮತ್ತಿತರರು ಉಪಸ್ಥಿತರಿದ್ದರು.  

LEAVE A REPLY

Please enter your comment!
Please enter your name here