ಕಡಬ ಟೈಮ್ಸ್: ತಿರುಪತಿ
ಪ್ರಸಾದದ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಧಾಮಿಕ ದತ್ತಿ ಇಲಾಖೆ ಅಡಿಯಲ್ಲಿನ ಎಲ್ಲಾ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹಕ್ಕೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಶುಕ್ರವಾರ
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದೆ.
ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಲಾಗಿದೆ.