ಕೊಕ್ಕಡ: ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ಸಂಜೆ ಕೊಕ್ಕಡದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಹಮೀದ್ ಎಂಬವರ 10ವರ್ಷ ಪ್ರಾಯದ ಪುತ್ರ, ಆತೂರಿನ ಆಯಿಷಾ ಸ್ಕೂಲ್ ನ 4ನೇ ತರಗತಿಯ ವಿಧ್ಯಾರ್ಥಿ ನವಾಫ್ ಇಸ್ಮಾಯಿಲ್ ಮೃತಪಟ್ಟ ಬಾಲಕ
ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ಬಾಲಕ ಕಾರಿನಡಿಗೆ ಬಿದ್ದು ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿ ಮೃತಪಟ್ಡಿದ್ದಾರೆ ಎಂದು ತಿಳಿದು ಬಂದಿದೆ.
ಆತೂರಿನ ಆಯಿಷಾ ಸ್ಕೂಲ್ ನ 4ನೇ ತರಗತಿಯ ವಿಧ್ಯಾರ್ಥಿಯಾಗಿದ್ದ ಈ ಬಾಲಕ ನ ಕಾರಿನ ಹಿಂಬದಿ ನಿಂತಿದ್ದದ್ದು ಅರಿವಿಗೆ ಬಾರದೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರ ಕೊಠಡಿಯಲ್ಲಿರಿಸಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.