ಸುಬ್ರಹ್ಮಣ್ಯ |ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಏರಿಕೆ

ಸುಬ್ರಹ್ಮಣ್ಯ  |ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಏರಿಕೆ

ಕಡಬ ಟೈಮ್ಸ್, ಸುಬ್ರಹ್ಮಣ್ಯ: ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸುತ್ತ ಮುತ್ತಲಿನ ಪ್ರದೇಶ ಮತ್ತು ಕುಮಾರ ಪರ್ವತ ತಪ್ಪಲಿನಲ್ಲಿ ನಿರಂತರ ಮಳೆಯಾಗುತ್ತಿದ್ದು ಕುಮಾರಧಾರಾ ನದಿ ನೀರಿನ ಹರಿವು ಹೆಚ್ಚಳಗೊಂಡಿದೆ.

ಸಣ್ಣ ಪುಟ್ಟ ನದಿ, ತೊರೆಗಳು ನಿರಂತರ ಮಳೆಯಿಂದಾಗಿ ತುಂಬಿ ಹರಿಯುತ್ತಿವೆ. ಅಲ್ಲದೆ ಕೆಲವೊಂದು ತಗ್ಗು ಪ್ರದೇಶ ಹಾಗೂ ಕೃಷಿ ತೋಟಗಳಿಗೆ ನೀರು ತುಂಬಿರುವುದು ತಿಳಿದು ಬಂದಿದೆ.ರವಿವಾರವೂ ಬಾರೀ ಮಳೆಯಾಗಿದ್ದು ಯಾವುದೇ ಹಾನಿ ಸಂಭವಿಸಿಲ್ಲ.

ಉಭಯ ತಾಲೂಕಿನ ವಿವಿಧ ಪ್ರದೇಶದಲ್ಲಿ ನಿರಂತರ ಮಳೆಯ ಕಾರಣ ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಚರಂಡಿ ವ್ಯವಸ್ಥೆಗಳು ಅಸಮರ್ಪಕತೆಯಿಂದ ಕೂಡಿರುವುದರಿಂದ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ.

970×90