ಸುಬ್ರಹ್ಮಣ್ಯ:ಉಸ್ತುವಾರಿ ಸಚಿವರಿಂದ ಮಾಸ್ಟರ್ ಪ್ಲಾನ್ ಕಾಮಗಾರಿಗಳ ಪರಿಶೀಲನೆ

ಸುಬ್ರಹ್ಮಣ್ಯ:ಉಸ್ತುವಾರಿ ಸಚಿವರಿಂದ ಮಾಸ್ಟರ್ ಪ್ಲಾನ್ ಕಾಮಗಾರಿಗಳ ಪರಿಶೀಲನೆ

ಕಡಬ ಟೈಮ್ಸ್, ಸುಬ್ರಹ್ಮಣ್ಯ:ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಬುಧವಾರ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭೇಟಿ ನೀಡಿದ್ದು ಪ್ರಗತಿ ಪರಿಶೀಲನೆ ನಡೆಸಿದರು.

ದೇವಸ್ಥಾನದ ವತಿಯಿಂದ ಮಾಸ್ಟರ್ ಪ್ಲಾನ್ ಕಾಮಗಾರಿಗಳು ನಡೆಯುತ್ತಿರುವುದರ ಬಗ್ಗೆ ಪರಿಶೀಲನೆ ನಡೆಸಿದರು. ನಂತರ ದೇವಸ್ಥಾನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕ ಎಸ್.ಅಂಗಾರ, ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು ಮತ್ತಿತರರು ಉಪಸ್ಥಿತರಿದ್ದರು.

970×90