ಕುಟ್ರುಪ್ಪಾಡಿ:ಕೋವಿಡ್ ಕಾರ್ಯಪಡೆ ಸಭೆ| ಮಾಸ್ಕ್ ಧರಿಸದಿದ್ದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ದಂಡ

ಕುಟ್ರುಪ್ಪಾಡಿ:ಕೋವಿಡ್ ಕಾರ್ಯಪಡೆ ಸಭೆ| ಮಾಸ್ಕ್ ಧರಿಸದಿದ್ದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ದಂಡ

ಕಡಬ ಟೈಮ್ಸ್, ಕುಟ್ರುಪ್ಪಾಡಿ: ಗ್ರಾಮಸ್ಥರು ಇನ್ನು ಮುಂದೆ  ಮಾಸ್ಕ್ ಧರಿಸದಿದ್ದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ   ಕೋವಿಡ್ ಕಾರ್ಯಪಡೆಯು  ದಂಡ ವಿಧಿಸುವ ಮೂಲಕ ಕಾನೂನು ಕ್ರಮಕ್ಕೆ ಮುಂದಾಗಲಿದೆ.

ಸೋಮವಾರ  ಕುಟ್ರುಪಾಡಿ ಗ್ರಾ.ಪಂ. ಹಾಗೂ ಎಡಮಂಗಲ ಗ್ರಾಮ ಪಂಚಾಯತ್ ಜಂಟಿಯಾಗಿ ಕುಟ್ರುಪಾಡಿ ಹಿ.ಪ್ರಾ.ಶಾಲೆಯ ಸಭಾಂಗಣದಲ್ಲಿ ಆಯೋಜನೆ ಮಾಡಿದ್ದ ಕೋವಿಡ್ ಕಾರ್ಯಪಡೆಯ ಸಭೆಯಲ್ಲಿ ನಿರ್ಣಯಿಸಲಾಗಿದೆ.ಕಡಬ ತಹಸೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಅಧ್ಯಕ್ಷತೆಯಲ್ಲಿ ಈ ಸಭೆ ನಡೆದಿದ್ದು ವ್ಯಾಪಾರಸ್ಥರು ತಮ್ಮ ಅಂಗಡಿಯಲ್ಲಿ ಸ್ಯಾನಿಟೈಸರ್ ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸದಿದ್ದರೆ ಅಂತವರ ವ್ಯಾಪಾರ ಪರವಾನಿಗೆಯನ್ನು ರದ್ದು ಮಾಡುವ ಬಗ್ಗೆಯೂ ನಿರ್ಣಯಿಸಲಾಗಿದೆ.

ಯಾವುದೇ ಮನೆಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದರೆ ಅಲ್ಲಿಗೆ ಕೊರೋನಾ  ಕಾರ್ಯಪಡೆಯ ಸದಸ್ಯರನ್ನು ನಿಯೋಜನೆ ಮಾಡಿ ಕಾನೂನು ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸದಿದ್ದರೆ   ಅಂತವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ನಿರ್ಣಯಿಸಲಾಗಿದೆ.ಸಭೆಯಲ್ಲಿ ಎಡಮಂಗಲ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ದಾಮೋಧರ, ಕಡಬ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್, ನೆಲ್ಯಾಡಿ ಜಿ.ಪಂ. ಸದಸ್ಯ ಸರ್ವೋತ್ತಮ ಗೌಡ, ತಾ.ಪಂ. ಸದಸ್ಯರಾದ ಗಣೇಶ್ ಕೈಕುರೆ, ಕೆ.ಟಿ.ವಲ್ಸಮ್ಮ, ಕಡಬ ಎಸ್.ಐ. ರುಕ್ಮ ನಾಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಸಭೆಯಲ್ಲಿ ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ಮಲೆ, ಆರೋಗ್ಯ ಸಹಾಯಕಿಯರು  ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.

970×90